ಕಳವು ಪ್ರಕರಣ: ಇಬ್ಬರ ಬಂಧನ

Update: 2019-10-04 18:44 GMT

ಬೆಂಗಳೂರು, ಅ.4: ಚಿನ್ನಾಭರಣ ಕಳವು ಪ್ರಕರಣ ಸಂಬಂಧ ಇಬ್ಬರನ್ನು ಇಲ್ಲಿನ ಬಾಗಲಗುಂಟೆ ಠಾಣಾ ಪೊಲೀಸರು, ವಿಚಾರಣೆಗೊಳಪಡಿಸಿದ್ದಾರೆ.

ಮಹಾಲಕ್ಷ್ಮೀ ಲೇಔಟ್‌ನ ರಾಕೇಶ್ ಗೌಡ(20), ಮಂಜುನಾಥ್ ನಗರದ ಇರ್ಫಾನ್(23) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ 16 ಗ್ರಾಂ ತೂಕದ ಚಿನ್ನ, 2 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿ ತನಿಖೆ ಮುಂದುವರೆಸಲಾಗಿದೆ ಎಂದು ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News