ಮನೆಗಳವು ಆರೋಪಿ ಬಂಧನ: 5.20 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

Update: 2019-10-04 18:48 GMT

ಬೆಂಗಳೂರು, ಅ.4: ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ಪೊಲೀಸರು 5 ಲಕ್ಷ 20 ಸಾವಿರ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.

ಕಲಬುರಗಿ ನಿವಾಸಿ ಸಂದೀಪ್ ಯಾದವ್(29) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಸಂದೀಪ್‌ಯಾದವ್, ವಿವಿ ಪುರಂನಲ್ಲಿ ಈ ಹಿಂದೆ ಪರಿಚಯವಾಗಿದ್ದ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ 240 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯು ವಿಲಾಸಿ ಜೀವನಕ್ಕಾಗಿ ಕೆಲಸಕ್ಕೆ ಹೋಗದೆ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News