ಬಿ.ಎಲ್.ಸಂತೋಷ್‌ರನ್ನು ಭೇಟಿಯಾದ ಮೇಯರ್ ಗೌತಮ್ ಕುಮಾರ್
Update: 2019-10-05 17:55 GMT
ಬೆಂಗಳೂರು, ಅ.5: ಬಿಬಿಎಂಪಿಯ ನೂತನ ಮೇಯರ್ ಗೌತಮ್ ಕುಮಾರ್ ಜೈನ್ ಬಿಜೆಪಿ ರಾಷ್ಟ್ರೀಯ ಸಂಘಟನಾ ಸಹ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಶನಿವಾರ ಬೆಳಗ್ಗೆ ಆಗಮಿಸಿದ ಮೇಯರ್ ಗೌತಮ್ ಕುಮಾರ್, ಸಂತೋಷ್‌ಗೆ ಕೃತಜ್ಞತೆ ಸಲ್ಲಿಸಿದರು. ಹಾಗೂ ಪಾಲಿಕೆಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ
ಈ ವೇಳೆ ಸಂತೋಷ್ ಗೌತಮ್ ಕುಮಾರ್‌ಗೆ ಹಲವು ಸಲಹೆ ಹಾಗೂ ಸೂಚನೆಗಳನ್ನು ನೀಡಿದ್ದು, ಜನರ ನಿರೀಕ್ಷೆಗಳಿಗೆ ಧಕ್ಕೆಯಾಗದಂತೆ ಕೆಲಸ ಮಾಡುವಂತೆ ಕಿವಿಮಾತು ಹೇಳಿದ್ದಾರೆ.