ಬೆಂಗಳೂರು: ರ‍್ಯಾಂಪ್ ವಾಕ್ ವೇಳೆ ವೇದಿಕೆಯಲ್ಲಿಯೇ ಕುಸಿದು ವಿದ್ಯಾರ್ಥಿನಿ ಮೃತ್ಯು

Update: 2019-10-19 13:54 GMT

ಬೆಂಗಳೂರು, ಅ.19: ಕಾಲೇಜಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ವೇಳೆ ವಿದ್ಯಾರ್ಥಿನಿಯೊಬ್ಬಳು ವೇದಿಕೆಯಲ್ಲಿಯೇ ಕುಸಿದು ಮೃತಪಟ್ಟಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪೀಣ್ಯದ ಏಮ್ಸ್ ಇನ್ಸ್‌ಟಿಟ್ಯೂಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಶ್ರೀರಾಂಪುರದ ಶಾಲಿನಿ(21) ಮೃತ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

ಇತ್ತೀಚಿಗೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಆಹ್ವಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದರಲ್ಲಿ ಶಾಲಿನಿ ನೃತ್ಯ ಮತ್ತು ರ‍್ಯಾಂಪ್ ವಾಕ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾಳೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಶಾಲಿನಿ ಮೃತಪಟ್ಟಿದ್ದಾಳೆ.

ಶಾಲಿನಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದು, ಈ ಸಂಬಂಧ ಪೀಣ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News