ನ.12ರಂದು ಬಾರಕೂರು ತಾಪಂ ಕ್ಷೇತ್ರಕ್ಕೆ ಉಪಚುನಾವಣೆ
Update: 2019-10-20 16:15 GMT
ಉಡುಪಿ, ಅ.20: ಉಡುಪಿ ತಾಲೂಕು ಪಂಚಾಯತ್ ವ್ಯಾಪ್ತಿಯ 04- ಬಾರಕೂರು ಕ್ಷೇತ್ರಕ್ಕೆ ನ.12ರಂದು ಉಪಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಬಾರಕೂರು ಕ್ಷೇತ್ರದ ಬಿಜೆಪಿ ಪಕ್ಷಕ್ಕೆ ಸೇರಿದ ತಾಲೂಕು ಪಂಚಾಯತ್ ಸದಸ್ಯ ಉಮೇಶ್ ಶೆಟ್ಟಿ ಎರಡು ತಿಂಗಳ ಹಿಂದೆ ಅನಾರೋಗ್ಯದಿಂದ ನಿಧನರಾದ ಹಿನ್ನೆಲೆಯಲ್ಲಿ ಈ ಸ್ಥಾನ ತೆರವಾಗಿತ್ತು.
ಈ ಕ್ಷೇತ್ರ ವ್ಯಾಪ್ತಿಯಲ್ಲಿ ಅ.28ರಿಂದ ನ.14ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಅ.28ರಂದು ಚುನಾವಣಾ ಅಧಿಸೂಚನೆ ಹೊರ ಡಿಸಲಿದ್ದು, ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನ.2ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.4 ಉಮೇದುವಾರಿಕ ಹಿಂತೆಗೆದು ಕೊಳ್ಳಲು ಕೊನೆಯ ದಿನಾಂಕವಾಗಿದೆ. ತಾಲೂಕು ಕೇಂದ್ರದಲ್ಲಿ ನ.14ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.