ಕಂಬಳಬೆಟ್ಟು: ಕೆಸ್ಸಾರ್ಟಿಸಿ ಬಸ್ - ಟಿಪ್ಪರ್ ಲಾರಿ ನಡುವೆ ಅಪಘಾತ; ಹಲವರಿಗೆ ಗಾಯ

Update: 2019-10-23 07:30 GMT

ಬಂಟ್ವಾಳ, ಅ. 23: ಕೆಸ್ಸಾರ್ಟಿಸಿ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿ ಬಸ್ ಚಾಲಕ ಗಂಭೀರ ಗಾಯ, ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲದ ಕಂಬಳಬೆಟ್ಟು ಎಂಬಲ್ಲಿ ಬುಧವಾರ ಸಂಭವಿಸಿದೆ.

ವಿಟ್ಲ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ವಿಟ್ಲ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ನಡುವೆ ಕಂಬಳಬೆಟ್ಟು ಎಂಬಲ್ಲಿ ಅಪಘಾತ  ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಬಸ್ ನಲ್ಲಿದ್ದ ಇತರ ಪ್ರಯಾಣಿಕರು ಕೂಡಾ ಸಣ್ಣ ಪುಟ್ಟಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಇನ್ನು ಕೆಲವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News