ಹರ್ಯಾಣ ವಿಧಾನಸಭೆ ಚುನಾವಣೆ ಅಧಿಕೃತ ಫಲಿತಾಂಶ ಪ್ರಕಟ: ಇಲ್ಲಿದೆ ಪಕ್ಷಗಳ ಬಲಾಬಲ

Update: 2019-10-24 17:18 GMT

ಹೊಸದಿಲ್ಲಿ, ಅ.24: ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ಉಂಟುಮಾಡಿದ್ದ ಹರ್ಯಾಣ ವಿಧಾನಸಭೆ ಚುನಾವಣೆಯ ಅಧಿಕೃತ ಫಲಿತಾಂಶ ಪ್ರಕಟಗೊಂಡಿದ್ದು, ಯಾವುದೇ ಪಕ್ಷ ಬಹುಮತ ಪಡೆದಿಲ್ಲ. ಆಡಳಿತರೂಡ ಬಿಜೆಪಿಯು 40 ಸ್ಥಾನಗಳಲ್ಲಿ ಜಯಗಳಿಸಿದ್ದು, ಮ್ಯಾಜಿಕ್ ನಂಬರ್ 45ರ ಗಡಿ ದಾಟಲು ವಿಫಲವಾಗಿದೆ.

ಬಿಜೆಪಿಗೆ ಭಾರೀ ಪೈಪೋಟಿ ನೀಡಿದ್ದ ಕಾಂಗ್ರೆಸ್ 31 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದು, ಮಾಜಿ ಹರ್ಯಾಣ ಸಿಎಂ ಓಂ ಪ್ರಕಾಶ್ ಚೌಟಾಲ ಅವರ ಮೊಮ್ಮಗ ದುಷ್ಯಂತ್ ಚೌಟಾಲ ಅವರ ಜನನಾಯಕ್ ಜನತಾ ಪಾರ್ಟಿ(ಜೆಜೆಪಿ) 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಜನನಾಯಕ್ ಜನತಾ ಪಾರ್ಟಿ ಕಿಂಗ್ ಮೇಕರ್ ಸ್ಥಾನದಲ್ಲಿ ನಿಂತಿದ್ದು, ಬಿಜೆಪಿಗೆ ಬೆಂಬಲ ಘೋಷಿಸುವ ಸಾಧ್ಯತೆಗಳಿವೆ.

ಇಂಡಿಯನ್ ನ್ಯಾಷನಲ್ ಲೋಕದಳ ಹಾಗೂ ಹರ್ಯಾಣ ಲೋಕ್ ಹಿತ್ ಪಕ್ಷ ತಲಾ ಒಂದು ಕ್ಷೇತ್ರದಲ್ಲಿ ಜಯಗಳಿಸಿದ್ದು, 7 ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಹರ್ಯಾಣದಲ್ಲಿ ಸದ್ಯ ಬಿಜೆಪಿ ಆಡಳಿತ ನಡೆಸುತ್ತಿದ್ದು, ಮನೋಹರ್ ಲಾಲ್ ಖಟ್ಟರ್ ಸಿಎಂ ಗಾದಿಯಲ್ಲಿದ್ದಾರೆ. ಕಳೆದ ಬಾರಿ ಬಹುಮತ ಪಡೆದು ಅಧಿಕಾರಕ್ಕೇರಿದ್ದ ಕಮಲ ಪಕ್ಷ ಈ ಬಾರಿ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು, ಪಕ್ಷೇತರರು ಅಥವಾ ಜೆಜೆಪಿ ಬೆಂಬಲದೊಂದಿಗೆ ಅಧಿಕಾರಕ್ಕೇರುವ ಸಾಧ್ಯತೆಗಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News