ಬಹಿರಂಗ ಕ್ಷಮೆ ಯಾಚಿಸದಿದ್ದಲ್ಲಿ ಸಿದ್ದರಾಮಯ್ಯ ವಿರುದ್ಧ ಹಕ್ಕುಚ್ಯುತಿ ಮಂಡನೆ: ಯಡಿಯೂರಪ್ಪ

Update: 2019-10-26 06:32 GMT

ಹುಬ್ಬಳ್ಳಿ, ಅ.26: ವಿಧಾನಸಭಾ ಸ್ಪೀಕರ್ ಬಗ್ಗೆ ಏಕವಚನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಇಲ್ಲವಾದರೆ ಅವರ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಸಿದ್ದರಾಮಯ್ಯ ಅವರು ಸ್ಪೀಕರ್ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ಇಲ್ಲವಾದಲ್ಲಿ ಜನರೇ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News