ಡಿಕೆ ಶಿವಕುಮಾರ್ ರನ್ನು ಭೇಟಿಯಾದ ಸಿದ್ದರಾಮಯ್ಯ, ಪರಮೇಶ್ವರ

Update: 2019-10-27 07:17 GMT

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ರವಿವಾರ ಬೆಳಗ್ಗೆ ಭೇಟಿ ನೀಡಿದರು. 

ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಅವರು ಡಿಕೆಶಿ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದರು. ಮಾತುಕತೆ ನಡೆಸಿದರು.

ಜೆಡಿಎಸ್ ಶಾಸಕರಾದ ಡಾ. ಅಂದಾನಿ, ಮಂಜುನಾಥ್, ವೀರಭದ್ರಯ್ಯ ಹಾಗೂ ಎಂಎಲ್ಸಿ ಶರವಣ ಅವರು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿದರು.

ಎಐಸಿಸಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಅವರು ಮಾಜಿ ಸಚಿವ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಸದ ಡಿಕೆ ಸುರೇಶ್ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News