ಉದ್ಯಮಿ ರಾಜ್ ಕುಂದ್ರಾಗೆ ಈ.ಡಿ. ಸಮನ್ಸ್

Update: 2019-10-29 04:40 GMT

ಮುಂಬೈ, ಎ.29: : ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಹಾಜರಾಗಲು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಪತಿ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಈ.ಡಿ) ಸಮನ್ಸ್ ಜಾರಿಗೊಳಿಸಿದೆ.

ಮುಂಬೈನಲ್ಲಿ ಪ್ರಕರಣದ ತನಿಖಾ ಅಧಿಕಾರಿಯ ಮುಂದೆ ಹಾಜರಾಗಲು ಕುಂದ್ರಾ ಅವರನ್ನು ಕೋರಲಾಗಿದೆ ಮತ್ತು ಅವರ ಹೇಳಿಕೆಯನ್ನು ದಾಖಲಿಸುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.

ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ಯಾಂಗ್ ಸ್ಟರ್ ಇಕ್ಬಾಲ್ ಮಿರ್ಚಿ ಮತ್ತು ಇತರರೊಂದಿಗಿನ ಕುಂದ್ರಾ ಅವರ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News