ಬೆಂಗಳೂರು: ಬೈಕ್ ವ್ಹೀಲಿಂಗ್ ಮಾಡುತ್ತಿದ್ದ 12 ಯುವಕರು ವಶಕ್ಕೆ

Update: 2019-10-29 15:07 GMT

ಬೆಂಗಳೂರು, ಅ.29: ವ್ಹೀಲಿಂಗ್ ಮಾಡುತ್ತಿದ್ದ 12 ಮಂದಿ ಯುವಕರನ್ನು ಬೆಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಮಾದನಾಯಕನಹಳ್ಳಿ, ಬೇಗೂರು, ನೆಲಮಂಗಲ, ಹೆಸರಘಟ್ಟ, ರಸ್ತೆಯಲ್ಲಿ ತಡರಾತ್ರಿ ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಗ್ರಾಮಾಂತರ ಪೊಲೀಸರು, ಬೈಕ್‌ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಬೈಕ್ ಸವಾರರನ್ನು ಬೆನ್ನಟ್ಟಿ ಹಿಡಿದು ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸಿದರು.

ನೈಸ್ ರಸ್ತೆ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಗಳಲ್ಲಿ ಯುವಕರು ವ್ಹೀಲಿಂಗ್ ಮಾಡುತ್ತಾ ವಾಹನ ಚಾಲಕರು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡು ತ್ತಿರುವ ಬಗ್ಗೆ ದೂರು ಹಿನ್ನೆಲೆಯಲ್ಲಿ ಬೆಂ.ಗ್ರಾಮಾಂತರ ಪ್ರದೇಶದ ವಿಶೇಷ ಕಾರ್ಯಾಚರಣೆ ನಡೆಸಿ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News