ಚೀನಾ ಮಾದರಿಯಲ್ಲಿ ಕ್ರೀಡೆಗೆ ಪ್ರೋತ್ಸಾಹ ಅಗತ್ಯ: ಶೋಭಾ ಕರಂದ್ಲಾಜೆ

Update: 2019-10-30 17:11 GMT

ಉಡುಪಿ, ಅ.30: ಚೀನಾ ದೇಶದಲ್ಲಿ ಓದಿಗಿಂತ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಮಕ್ಕಳಿಗೆ ತರಬೇತಿ, ಆಹಾರ ಪದ್ಧತಿ, ವ್ಯಾಯಾಮ, ಮನೋ ಭಾವ ಬೆಳೆಸುವ ಮೂಲಕ ಕ್ರೀಡೆಗೆ ಸಜ್ಜುಗೊಳಿಸಲಾಗುತ್ತದೆ. ಅದೇ ರೀತಿ ಭಾರತದಲ್ಲೂ ಕ್ರೀಡೆಗೆ ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕು ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಉಪ್ಪೂರು ಸರಕಾರಿ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಬ್ರಹ್ಮಾವರ ವಲಯ ಮಟ್ಟದ ಎರಡು ದಿನಗಳ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ವಹಿಸಿದ್ದರು. ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಸದಸ್ಯರಾದ ಜನಾರ್ದನ ತೋನ್ಸೆ, ಗೀತಾಂಜಲಿ ಸುವರ್ಣ, ತಾಪಂ ಸದಸ್ಯ ದಿನಕರ ಹೇರೂರು, ನಳಿನಿ ಪ್ರದೀಪ್ ರಾವ್, ಮಾಜಿ ಜಿಪಂ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಮಧುಕರ ಎಸ್., ಉಪ್ಪೂರು ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ರಾಜು ಪೂಜಾರಿ, ಗ್ರಾಪಂ ಸದಸ್ಯ ಫ್ರಾಂಕಿ ಡಿಸೋಜ, ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್.ರಮೇಶ್ ಶೆಟ್ಟಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಓ.ಆರ್.ಪ್ರಕಾಶ್ ಉಪಸ್ಥಿತರಿದ್ದರು.

ಉಪ್ಪೂರು ಶಾಲಾ ಮುಖ್ಯೋಪಾಧ್ಯಾಯಿನಿ ನಾಗರತ್ನ ಸ್ವಾಗತಿಸಿದರು. ಸತೀ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News