ಜಮ್ಮು-ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಪ್ರಮಾಣ
Update: 2019-10-31 09:10 GMT
ಶ್ರೀನಗರ, ಅ.31: ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ಗಿರೀಶ್ ಚಂದ್ರ ಮುರ್ಮು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಪ್ರಮಾಣವಚನ ಬೋಧಿಸಿದರು.
ಗುಜರಾತ್ ಕೇಡರ್ ನ 1985ರ ಬ್ಯಾಚ್ ನ ಐಎಎಸ್ ಅಧಿಕಾರಿ ಗಿರೀಶ್ ಚಂದ್ರ ಮುರ್ಮು ಕೇಂದ್ರ ಹಣಕಾಸು ಸಚಿವಾಲಯದ ಅಡಿಯಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿದ್ದರು. ಗಿರೀಶ್ ಚಂದ್ರ ಮುರ್ಮು ಅವರು ಪಿಎಂ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರ ವಿಶ್ವಾಸಾರ್ಹ ಅಧಿಕಾರಿಯಾಗಿ ಗುರುತಿಸಿಕೊಂಡವರು. ಮುರ್ಮು ಅವರು ನರೇಂದ್ರ ಮೋದಿ ಅವರು ಗುಜರಾತ್ ನ ಮುಖ್ಯಮಂತ್ರಿಯಾಗಿದ್ದಾಗ ಅವರ ಪ್ರಧಾನ ಕಾರ್ಯದರ್ಶಿಯಾಗಿಸಿದ್ದರು.