ಮಂಗಳೂರು: ಆರೋಗ್ಯದ ಕುರಿತು ಉಪನ್ಯಾಸ
Update: 2019-10-31 12:34 GMT
ಮಂಗಳೂರು, ಅ.31: ಜಿಲ್ಲಾ ಆಯುಷ್ ಇಲಾಖಾ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ ಡಾ. ವಿವೇಕಾನಂದ ಪ್ರಭು ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಕಾರ್ಯಕ್ರಮ ಜರುಗಿತು. ಈ ಸಂದರ್ಭ ಔಷಧಿಗಿಡಗಳ ಪ್ರದರ್ಶನ ಹಾಗೂ ಮಾಹಿತಿ ನೀಡಲಾಯಿತು.
‘ಆಧುನಿಕ ಜೀವನ ಶೈಲಿಯ ವ್ಯಾಧಿಗಳು ಮತ್ತು ಅದರ ಆಯುರ್ವೇದ ಪರಿಹಾರ’ ಕುರಿತು ಡಾ.ಸುರೇಶ್ ನೆಗಲಗುಳಿ ಉಪನ್ಯಾಸ ನೀಡಿದರು.
ದ.ಕ.ಜಿಪಂ ಸಿಇಒ ಡಾ.ಆರ್.ಸೆಲ್ವಮಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣರಾವ್, ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಸವಿತಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಮುಹಮ್ಮದ್ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ ಉಪಸ್ಥಿತರಿದ್ದರು.