ನಾಡಿನ ಜನತೆಗೆ ರಾಜ್ಯೋತ್ಸವ ಶುಭಾಶಯ ಕೋರಿದ ಮುಖ್ಯಮಂತ್ರಿ ಯಡಿಯೂರಪ್ಪ

Update: 2019-10-31 13:50 GMT

ಬೆಂಗಳೂರು, ಅ.31: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡಿನ ಜನತೆಗೆ ಹಾಗೂ ಹೊರನಾಡಿನ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ನಾಡಿನ ಭವ್ಯ ಪರಂಪರೆ, ಇತಿಹಾಸ ಹಾಗೂ ಪರಂಪರೆಯನ್ನು ಉಳಿಸಿ-ಬೆಳೆಸುವ ಜೊತೆಗೆ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿರುವ ಕನ್ನಡ ಸೋದರ-ಸೋದರಿಯರ ಬದುಕು ಕಟ್ಟಿಕೊಡಲು ತನು, ಮನ, ಧನದಿಂದ ನೆರವಾಗೋಣ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಕನ್ನಡಾಂಬೆ ಭುವನೇಶ್ವರಿಯ ಅನುಗ್ರಹದಿಂದ ಸ್ವಚ್ಛ, ಸ್ವಸ್ಥ ಹಾಗೂ ಸಮೃದ್ಧ ಕನ್ನಡ ನಾಡನ್ನು ನಿರ್ಮಿಸೋಣ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News