ಎಸ್‌ಡಿಪಿಐ ದ.ಕ. ಜಿಲ್ಲಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ
Update: 2019-11-01 14:55 GMT
ಮಂಗಳೂರು, ನ.1: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ದ.ಕ ಜಿಲ್ಲಾ ಸಮಿತಿಯ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವವು ಪಕ್ಷದ ಜಿಲ್ಲಾ ಕಚೇರಿಯ ಮುಂದೆ ನಡೆಯಿತು.
ಎಸ್‌ಡಿಪಿಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಸುಹೈಲ್ ಖಾನ್ ಧ್ವಜಾರೋಹಣಗೈದರು. ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಸಂದೇಶ ನೀಡಿದರು. ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ, ಜಿಲ್ಲಾ ಸಮಿತಿ ಸದಸ್ಯ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ, ಶರೀಫ್ ಪಾಂಡೇಶ್ವರ ಮತ್ತಿತರರು ಉಪಸ್ಥಿತರಿದ್ದರು.