ಸಿಸಿಬಿ ಕಾರ್ಯಾಚರಣೆ: ಗಾಂಜಾ ಮಾರಾಟ ಆರೋಪದಲ್ಲಿ ಇಬ್ಬರ ಸೆರೆ

Update: 2019-11-01 17:12 GMT

ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಮಂಗಳೂರು ದಕ್ಷಿಣ ಪೊಲೀಸ್  ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿರುತ್ತಾರೆ.

ಬಂಧಿತರನ್ನು ನಾಟೆಕಲ್ ನಿವಾಸಿ ಹನೀಫ್ (32), ಮಂಜೇಶ್ವರ ನಿವಾಸಿ ಶಫೀಕ್ (29) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಒಟ್ಟು 21,000 ರೂ. ಮೌಲ್ಯದ 525 ಗ್ರಾಂ ಗಾಂಜಾ, 2 ಮೊಬೈಲ್ ಫೋನ್ ಗಳು,  2000 ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News