ಅನರ್ಹ ಶಾಸಕರ ಕ್ಷೇತ್ರಗಳು ರಾಜ್ಯದಲ್ಲಿ ಇಲ್ಲವೇ?: ಸಚಿವ ಸಿ.ಸಿ.ಪಾಟೀಲ್ ಪ್ರಶ್ನೆ

Update: 2019-11-02 14:01 GMT

ಹೊಸಪೇಟೆ, ನ. 2: ಅಭಿವೃದ್ಧಿ ದೃಷ್ಟಿಯಿಂದ ಅನರ್ಹ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಿದರೆ ತಪ್ಪೇನು? ಆ ಕ್ಷೇತ್ರಗಳು ರಾಜ್ಯದಲ್ಲಿ ಇಲ್ಲವೇ? ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಖಾರವಾಗಿ ಪ್ರಶ್ನಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅನುದಾನ ಹಂಚಿಕೆ ವಿಚಾರದಲ್ಲಿ ತಾರತಮ್ಯ ಸರಿಯಲ್ಲ. ಈ ವಿಚಾರದಲ್ಲಿ ಸಿಎಂ ಯಡಿಯೂರಪ್ಪನವರು ರಾಜಕಾರಣ ಮಾಡುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಣೆ ನೀಡಿದರು.

ನೆರೆ ಸಂತ್ರಸ್ತರಿಗೆ ಬದುಕು ಕಟ್ಟಿಕೊಡಲು ಶ್ರಮಿಸುತ್ತಿದೆ. ಈಗಾಗಲೇ ತಲಾ 10 ಸಾವಿರ ರೂ.ಪರಿಹಾರ ನೀಡಿದ್ದು, ಮನೆ ಕಟ್ಟಿಸಿಕೊಳ್ಳಲು ಮೊದಲ ಹಂತದಲ್ಲೇ 5 ಲಕ್ಷ ರೂ.ಪರಿಹಾರ ಘೋಷಿಸಿದ್ದು, ತಲಾ 1 ಲಕ್ಷ ರೂ.ಬಿಡುಗಡೆ ಮಾಡಿರುವ ದೇಶದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ ಎಂದರು.

ಹದಿನೈದು ಕ್ಷೇತ್ರಗಳ ಉಪಚುನಾವಣೆ ಪೈಕಿ ಬಿಜೆಪಿ ಕನಿಷ್ಟ 10ರಿಂದ 12 ಸ್ಥಾನಗಳಲ್ಲಿ ಗೆಲ್ಲಲಿದೆ. ಅನರ್ಹರಿಗೆ ಟಿಕೆಟ್ ನೀಡುವ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News