ಶೀಘ್ರದಲ್ಲೇ ಭ್ರಷ್ಟಾಚಾರದ ವಿಡಿಯೋ ಬಿಡುಗಡೆ: ಸತೀಶ್ ಜಾರಕಿಹೊಳಿ

Update: 2019-11-02 14:32 GMT

ಬೆಳಗಾವಿ, ನ.2: ಗೋಕಾಕ್ ನಗರಸಭೆಯ ಭ್ರಷ್ಟಾಚಾರ ನಡೆದಿರುವ ಆರೋಪ ಸಂಬಂಧ ವಿಡಿಯೋವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ದಿನಗಳಿಂದ ಕೆಲ ಕೆಲಸಗಳಲ್ಲಿ ತೊಡಗಿಕೊಂಡಿದ್ದೇನೆ. ಗೋಕಾಕ್ ನಗರಸಭೆಯ ಭ್ರಷ್ಟಾಚಾರದ ಕುರಿತು ಇನ್ನೊಂದು ವಿಡಿಯೋ ಇದ್ದು, ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದರು.

ಗೋಕಾಕ್ ತಾಲೂಕು ಪಂಚಾಯತ್ ನ 23 ಜನ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿರುವುದು ಹೊಸದಲ್ಲ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅವರಿಗೆ ನೋಟಿಸ್ ನೀಡಿದ್ದೇವೆ. ಅಲ್ಲದೆ, ರಾಜೀನಾಮೆಯನ್ನು ಪಕ್ಷದ ಜಿಲ್ಲಾಧ್ಯಕ್ಷರಿಗೆ ನೀಡಬೇಕು. ಅಧಿಕಾರಿಗಳಿಗೆ ನೀಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.

ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಖಾಲಿ ಮಾಡಿಸುವ ಪ್ರಶ್ನೆಯೇ ಇಲ್ಲ. ಅಳಿಯ, ಮಾವನ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತೇವೆ. ಜನ ಯಾವ ರೀತಿ ಆಶೀರ್ವಾದ ಮಾಡುತ್ತಾರೆ ಕಾದು ನೋಡಬೇಕಿದೆ ಎಂದು ರಮೇಶ್ ಜಾರಕಿಹೊಳ್ಳಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News