ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-11-02 17:03 GMT

ಕಾರ್ಕಳ, ನ.2: ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಇರ್ವತ್ತೂರು ನಿವಾಸಿ ಹರೀಶ್ ಪೂಜಾರಿ(50) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ನ.2ರಂದು ಬೆಳಗ್ಗೆ ಮನೆಯ ಹಿಂಬದಿಯ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ ನಗರ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಬೆಟ್ಟು ನಿವಾಸಿ ಶೇಖ್ ನೂರುಲ್ಲಾ ಹಸನ್ (50) ಎಂಬವರು ಜೀವನದಲ್ಲಿ ಜಿಗುಪ್ಪೆಗೊಂಡು ನ.1 ರಂದು ಬೆಳಗ್ಗೆ ಕಾರ್ಕಳ ಅಂಚೆ ಕಚೇರಿಯ ಹಿಂಬದಿಯಲ್ಲಿರುವ ಹಳೆಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News