ಬೆದರಿಸಿ, ಹಣ ವಸೂಲಿ ಪ್ರಕರಣ: ಇಬ್ಬರ ಸೆರೆ

Update: 2019-11-04 16:19 GMT

ಬೆಂಗಳೂರು, ನ.4: ಅಂಗಡಿಯೊಂದಕ್ಕೆ ನುಗ್ಗಿ ಮಾರಕಾಸ್ತ್ರಗಳಿಂದ ಬೆದರಿಸಿ ಹಣ ವಸೂಲಿ ಮಾಡಿದ್ದ ಆರೋಪ ಪ್ರಕರಣ ಸಂಬಂಧ ಇಬ್ಬರನ್ನು ಇಲ್ಲಿನ ಕೆಜಿಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಗರದ ಗೋವಿಂದಪುರದ ಅಬ್ದುಲ್ ವಾಜೀದ್(19), ವಿನೋಭ ನಗರದ ಪರ್ವೆಝ್(19) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಅ.29 ರಂದು ಕಾಡುಗೊಂಡನಹಳ್ಳಿ ಮುಖ್ಯರಸ್ತೆಯ ಸಾಗರ್ ಗಾರ್ಡನ್ ಬಳಿಯ ಹಾಲಿನ ಡೈರಿಯಲ್ಲಿ ಶಹಜಹಾನ್(65) ಎಂಬುವವರು ಕೆಲಸ ಮಾಡುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದಿದ್ದ ಆರೋಪಿಗಳಲ್ಲಿ ಹೆಲ್ಮೆಟ್ ಧರಿಸಿದ ಓರ್ವ ಡೈರಿಗೆ ನುಗ್ಗಿ ಶಹಜಹಾನ್ ಅವರಿಗೆ ಮಾರಕಾಸ್ತ್ರಗಳಿಂದ ಬೆದರಿಸಿ ನಗದು ಕಸಿದು ಪರಾರಿಯಾಗಿದ್ದ ಎನ್ನಲಾಗಿದೆ.

ಈ ಕೃತ್ಯವು ಸ್ಥಳದಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ದಾಖಲಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News