ಪಟ್ಟಿಯಲ್ಲಿ ಮತದಾರರ ಹೆಸರು ನಾಪತ್ತೆ: ಮಾಹಿತಿ ನೀಡಲು ಚು.ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ

Update: 2019-11-04 17:31 GMT

ಬೆಂಗಳೂರು, ನ.4: ಮತದಾರರ ಪಟ್ಟಿಗೆ ಸೇರ್ಪಡಿಸಿಕೊಳ್ಳಲು ಹಾಗೂ ಮತದಾರರ ಅರ್ಜಿಗಳನ್ನು ಪರಿಗಣಿಸಲು ಮಿತಿ ಏನಾದರೂ ಇದೆಯೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ಹೈಕೋರ್ಟ್ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮತ್ತು ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ.

ಈ ಕುರಿತು ಎನ್‌ಜಿಒ ವೈಟ್‌ಫೀಲ್ಡ್ ರೈಸಿಂಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸುವ ಉದ್ದೇಶದಿಂದ ಮಹದೇವಪುರ ವಿಧಾನಸಭೆ ಕ್ಷೇತ್ರದ ಸಾವಿರಾರು ನಿವಾಸಿಗಳು ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿದ್ದರು. ಮತ್ತು ಕೆಲವರು ನೇರವಾಗಿ ಅರ್ಜಿ ಸಲ್ಲಿಸಿದ್ದರು. ನಂತರ ಬಿಬಿಎಂಪಿ ಮತದಾರರ ಪಟ್ಟಿ ಪ್ರಕಟಿಸಿತ್ತು. ಆದರೆ, ಆ ಪಟ್ಟಿಯಲ್ಲಿ ನಮ್ಮ ಹೆಸರು ಇರಲಿಲ್ಲ. ಈ ಸಂಬಂಧ ಪದೇ ಪದೇ ಮನವಿ ಸಲ್ಲಿಸಿದರೂ ಚುನಾವಣಾ ಆಯೋಗ ಸೂಕ್ತವಾಗಿ ಸ್ಪಂದಿಸಲಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News