ಟ್ರಕ್- ಆಟೋ ಢಿಕ್ಕಿ: 3 ಮಕ್ಕಳು ಸೇರಿ ಐವರು ಸಾವು

Update: 2019-11-05 05:07 GMT

ಪಾಟ್ನಾ, ನ.5: ಮುಜಾಫರ್ಪುರದಲ್ಲಿ ಟ್ರಕ್ ಮತ್ತು ಆಟೋ ನಡುವೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 3 ಮಕ್ಕಳು ಸೇರಿದಂತೆ 5 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಮೃತಪಟ್ಟವರ ಕುಟುಂಬಕ್ಕೆ ಮುಜಾಫರ್ಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಎ.ಆರ್.ಘೋಷ್ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News