ಉಡುಪಿ: ಸ್ಯಾಂಡ್‌ಆ್ಯಪ್‌ನಲ್ಲಿ ಮರಳು ಲಭ್ಯ

Update: 2019-11-05 16:04 GMT

ಉಡುಪಿ, ನ.5: ಜಿಲ್ಲೆಯ ಬಜೆ ಅಣೆಕಟ್ಟಿನಲ್ಲಿ ಹೂಳೆತ್ತುವ ಕಾರ್ಯ ಪ್ರಗತಿಯಲ್ಲಿದ್ದು, ಇಲ್ಲಿನ ಹೂಳಿನಲ್ಲಿ ದೊರೆಯುವ ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ‘ಸ್ಯಾಂಡ್ ಆ್ಯಪ್’ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಮರಳನ್ನು ಸಾಗಾಟ ಮಾಡಲು ಇಚ್ಛಿಸುವವರು ತಮ್ಮ ವಾಹನವನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸ್ಯಾಂಡ್ ಆ್ಯಪ್‌ನಲ್ಲಿ ನೊಂದಾಯಿಸಿ ಕೊಳ್ಳಬೇಕಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಹಿರಿಯ ಭೂವಿಜ್ಞಾನಿಗಳ ಕಚೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ, ಉಡುಪಿ ಜಿಲ್ಲೆ (ದೂರವಾಣಿ ಸಂಖ್ಯೆ:0820-2572333) ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿ ಯಾಗಿರುವ ಹಿರಿಯ ಭೂವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News