ನ. 7ರಿಂದ ಉಡುಪಿ ಬೋರ್ಡ್ ಹೈಸ್ಕೂಲ್‌ನಲ್ಲಿ ಗಾಂಧಿ ಕುರಿತ ಛಾಯಾಚಿತ್ರ ಪ್ರದರ್ಶನ

Update: 2019-11-05 16:25 GMT

ಉಡುಪಿ, ನ.5: ಮಹಾತ್ಮ ಗಾಂಧೀಜಿ ಅವರ 150 ನೇ ಜನ್ಮ ವರ್ಷಾಚರಣೆ ಅಂಗವಾಗಿ, ಗಾಂಧೀಜಿ ಕುರಿತ ಅಪೂರ್ವ ಛಾಯಾಚಿತ್ರ ಪ್ರದರ್ಶನವೊಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಉಡುಪಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ನ. 7ರಿಂದ 9ರವರೆಗೆ ನಡೆಯಲಿದೆ.

ನ.7ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರದರ್ಶನ ವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಮಹಾತ್ಮಗಾಂಧೀಜಿ ಅವರ ಈ ಅಪೂರ್ವ ಛಾಯಾಚಿತ್ರ ಪ್ರದರ್ಶನ ವನ್ನು ವೀಕ್ಷಿಸುವಂತೆ ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಷಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News