ನ.6, 7ರಂದು ಸಾಗರ್ ಕವಚ್ ಅಣುಕು ಕಾರ್ಯಾಚರಣೆ

Update: 2019-11-05 17:11 GMT

ಮಂಗಳೂರು, ನ.5: ಭಯೋತ್ಪಾದಕ ದಾಳಿ, ಇತರ ಕೃತ್ಯ ತಡೆಗಟ್ಟಲು ಯಾವ ರೀತಿಯ ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂಬುದನ್ನು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ಸಾಗರ್ ಕವಚ್ ಅಣುಕು ಕಾರ್ಯಾಚರಣೆಯನ್ನು ನ.6 ಮತ್ತು 7ರಂದು ದ.ಕ ಜಿಲ್ಲಾಡಳಿತ, ಇಂಡಿಯನ್ ಕೋಸ್ಟ್ ಗಾರ್ಡ್, ಕರಾವಳಿ ಭದ್ರತಾ ಪಡೆ ಮತ್ತು ಪೊಲೀಸ್ ಇಲಾಖೆಗಳ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದೆ.

ರಕ್ಷಣಾ ಸಾಮಾರ್ಥ್ಯವನ್ನು ಸನ್ನದ್ಧಗೊಳಿಸುವುದು ಈ ಕಾರ್ಯಾಚರಣೆಯ ಮುಖ್ಯ ಉದ್ದೇಶ. ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳ ನಡುವಿನ ಸಾಮರಸ್ಯವನ್ನು ವೃದ್ಧಿಸಲು ಹಾಗೂ ಪ್ರಸ್ತುತ ಇರುವ ಸಾಮಾರ್ಥ್ಯವನ್ನು ಉನ್ನತೀಕರಣಗೊಳಿಸುವ ಉದ್ದೇಶ ಹೊಂದಿದೆ. ಸಮುದ್ರ ತೀರದ ಪ್ರಯೋಗ ಚಟುವಟಿಕೆಗಳ ಹೊಣೆಗಾರಿಕೆಯನ್ನು ಇಂಡಿಯನ್ ಕೋಸ್ಟ್ ಗಾರ್ಡ್ ತೆಗೆದುಕೊಂಡಿದ್ದು ಇದನ್ನು ಹೊರತುಪಡಿಸಿ ಇತರ ಪ್ರದೇಶದಲ್ಲಿ ಸಾಗರ್ ಕವಚ್ ಪ್ರಯೋಗವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಿದೆ.

ಅಣಕು ಪ್ರದರ್ಶನವನ್ನು ಸಾರ್ವಜನಿಕ ಸ್ಥಳಗಳಾದ ಪ್ರಾರ್ಥನಾ ಮಂದಿರ, ಪ್ರತಿಷ್ಠಿತ ಶಾಲಾ ಕಾಲೇಜುಗಳು, ರೈಲು ನಿಲ್ದಾಣ, ಬಸ್ ನಿಲ್ದಾಣ, ಬಂದರು, ಶಾಪಿಂಗ್ ಕಾಂಪ್ಲೆಕ್ಸ್‌ಗಳು, ಕಡಲ ಕಿನಾರೆಗಳಲ್ಲಿ, ರಸ್ತೆ ಸೇರಿದಂತೆ ಇತರ ಪ್ರಮುಖ ಸ್ಥಳಗಳಲ್ಲಿ ನಡೆಸಲಾಗುತ್ತದೆ.

ಈ ಪ್ರಯೋಗವು ಅರಿವು ಮೂಡಿಸುವ ಕಾರ್ಯವಾಗಿದ್ದು, ಸಾರ್ವಜನಿಕರು, ಸಂಘ-ಸಂಸ್ಥೆಗಳು, ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಬಹುದು. ಸಾರ್ವಜನಿಕರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News