ಕಾರ್ಕಳ: ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ
Update: 2019-11-07 15:02 GMT
ಉಡುಪಿ, ನ.7: ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕಾರ್ಕಳ ತಾಲೂಕಿನ ಬೆಳ್ಮಣ್‌ನ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ದಾಳಿ ನಡೆಸಿ 15 ಪ್ರಕರಣಗಳನ್ನು ದಾಖಲಿಸಿದ್ದಲ್ಲದೇ, ದಂಡ ವಸೂಲಿ ಮಾಡಲಾಯಿತು.
ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ, ಕಾರ್ಕಳ ತಾಲೂಕು ಅಧಿಕಾರಿ ಡಾ.ಕೃಷ್ಣಾನಂದ, ಹಿರಿಯ ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಕಾರ್ಕಳ ಹಿರಿಯ ಆರೋಗ್ಯ ಸಹಾಯಕ ಶಿವರಾಮ ಟ್, ರಾಷ್ಟ್ರೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜಕಾರ್ಯಕರ್ತೆ ಶೈಲಾ ಶ್ಯಾಮನೂರ್, ಕಾರ್ಕಳ ಪೊಲೀಸ್ ಠಾಣೆ ಆರಕ್ಷಕರಾದ ಮಂಜುನಾಥ್, ಗುರುರಾಜ್ ಉಪಸ್ಥಿತರಿದ್ದರು