ಮಂಗಳೂರಿನಲ್ಲಿ ನ.11ರ ಬೆಳಗ್ಗೆಯವರೆಗೆ ನಿಷೇಧಾಜ್ಞೆ ಜಾರಿ: ನಗರ ಪೊಲೀಸ್ ಆಯುಕ್ತ ಡಾ.ಹರ್ಷ

Update: 2019-11-09 06:20 GMT

ಮಂಗಳೂರು, ನ.9: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಇಂದು ಬೆಳಗ್ಗೆ 10:30ಕ್ಕೆ ತೀರ್ಪು ಹೊರಬೀಳಲಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನ.9ರ (ಇಂದು) ಬೆಳಗ್ಗೆ 10 ಗಂಟೆಯಿಂದ ನ.11ರ ಬೆಳಗ್ಗೆ 6ರವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಡಾ.ಹರ್ಷ ಪಿ.ಎಸ್. ಆದೇಶ ಹೊರಡಿಸಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಭಾರತೀಯ ದಂಡ ಸಂಹಿತೆ ಪ್ರಕ್ರಿಯಾ ಸಂಹಿತೆಯ ಕಲಂ 144ರ ಅನ್ವಯ ನಿರ್ಬಂಧನ ಆಜ್ಞೆ ವಿಧಿಸಿರುವುದಾಗಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ನಡುವೆ ಮಂಗಳೂರು ನಗರದಾದ್ಯಂತ ಬಿಗು ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಆಯಕಟ್ಟಿನ ಸ್ಥಳಗಳಲ್ಲಿ ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಪರಾಧ ಹಿನ್ನೆಲೆಯುಳ್ಳವರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News