ಹಜ್ ಯಾತ್ರೆ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
Update: 2019-11-09 14:16 GMT
ಮಂಗಳೂರು: ಭಾರತೀಯ ಹಜ್ ಸಮಿತಿ ಮೂಲಕ ಪವಿತ್ರ ಹಜ್ ಯಾತ್ರೆ ಬಯಸುವವರಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 5ರ ತನಕ ವಿಸ್ತರಿಸಲಾಗಿದೆ.
ಈ ಹಿಂದೆ ನ. 10ನ್ನು ಕೊನೆಯ ದಿನವೆಂದು ನಿಗದಿಪಡಿಸಲಾಗಿತ್ತು. ಯಾತ್ರಾರ್ಥಿಗಳು ಡಿ. 10ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಹಜ್ ಸಮಿತಿ ಸದಸ್ಯ ಅಬೂಬಕರ್ ಸಿದ್ದೀಕ್ ಮೊಂಟುಗೋಳಿ ತಿಳಿಸಿದ್ದಾರೆ.