ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

Update: 2019-11-09 14:29 GMT

ಬೆಂಗಳೂರು, ನ.9: ನಗರದ ಲಗ್ಗೆರೆ ಪೈಪ್‌ಲೈನ್ ರಸ್ತೆಯಲ್ಲಿದ್ದ ಕೆಲ ತ್ಯಾಜ್ಯದ ರಾಶಿಗೆ ಬೆಂಕಿ ಬಿದ್ದಿದ್ದು, ಸೂಕ್ತ ಸಮಯಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ನಂದಿಸಿ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿಸಿದ್ದಾರೆ.

ಶುಕ್ರವಾರ ರಾತ್ರಿ ಕಸದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದಾಗ, ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಘಟನೆ ನಡೆದ ಸಮೀಪದಲ್ಲೇ ಗ್ಯಾಸ್ ಬಂಕ್ ಇದ್ದು, ಬೆಂಕಿಯ ಕಿಡಿ ತಾಕಿದ್ದರೆ, ಭಾರೀ ಅನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News