ರಾಜೀವ್‍ ಗಾಂಧಿ ಆರೋಗ್ಯ ವಿವಿ 20ನೇ ವಾರ್ಷಿಕ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ಗೆ ಚಾಲನೆ

Update: 2019-11-12 13:35 GMT

ಮೂಡುಬಿದಿರೆ: ಬೆಂಗಳೂರು ರಾಜೀವ್‍ಗಾಂಧಿ ಆರೋಗ್ಯ ವಿವಿ ಮತ್ತು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಮೂರು ದಿನಗಳು ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಡೆಯಲಿರುವ 20ನೇ ವಾರ್ಷಿಕ ಅಥ್ಲೆಟಿಕ್ ಚಾಂಪಿಯನ್‍ಶಿಪ್ 2019 ಮಂಗಳವಾರ ಆರಂಭಗೊಂಡಿತು.

ರಾಜೀವ್‍ಗಾಂಧಿ ವಿವಿಯ ರಿಜಿಸ್ಟ್ರಾರ್ ಶಿವಾನಂದ ಕಪಾಶಿ ಕ್ರೀಡಾಕೂಟವನ್ನು ಉದ್ಘಾಟಿಸಿ, ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಿ ತಮ್ಮ ಸಾಧನೆ ಮಾಡಬೇಕು. ಈ ಮೂಲಕ ರಾಷ್ಟ್ರಮಟ್ಟದಲ್ಲಿ ಮಿಂಚಬೇಕೆಂದು ಹೇಳಿದರು. 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆಯನ್ನು ವಹಿಸಿದ್ದರು. 

ರಾಜೀವ್‍ಗಾಂಧಿ ಆರೋಗ್ಯ ವಿವಿಯ ಡೆಪ್ಯುಟಿ ರಿಜಿಸ್ಟ್ರಾರ್ ಡಾ.ಬಿ ವಸಂತ ಶೆಟ್ಟಿ, ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರಿನ ಎ.ಜೆ.ದಂತ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ, ರಾಜೀವ್‍ಗಾಂಧಿ ಆರೋಗ್ಯ ವಿವಿಯ ಸೆನೆಟ್ ಸದಸ್ಯ ಡಾ.ಶರಣ್ ಜೆ.ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿಗಳಾದ ವಿನಯ ಆಳ್ವ, ವಿವೇಕ್ ಆಳ್ವ, ಕೂಟದ ಸಂಯೋಜಕ ಸೆಲ್ವೇಂಡ್ರನ್ ಉಪಸ್ಥಿತರಿದ್ದರು. 

ರಾಷ್ಟ್ರಮಟ್ಟದ ಕ್ರೀಡಾಪಟುಗಳಾದ ಸುಹೇಲ್, ಕಪಿಲ್ ಆನಂದ್, ಶರಲ್ ಬಹೇನಾ, ಅಭಿನ್ ಷಾಜಿ, ನಿಯಾಝ್, ರೋಹಿತ್ ಯಾದವ್ ಕ್ರೀಡಾಜ್ಯೋತಿ ಬೆಳಗಿದರು. ಹಿತೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು. 

ಆಳ್ವಾಸ್ ಲ್ಯಾಬ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ. ವರ್ಣನ್ ಡಿಸಿಲ್ವಾ ಸ್ವಾಗತಿಸಿದರು. ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲೆ ಡಾ.ಜೆನಿಕಾ ಡಿಸೋಜ ವಂದಿಸಿದರು. ವಿದ್ಯಾರ್ಥಿನಿ ದೀಕ್ಷಾ ಗೌಡ ಯು. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News