ಆರ್ಯಾಪು: ಗಾಂಧಿ ಸಂಕಲ್ಪ ಯಾತ್ರೆ
ಪುತ್ತೂರು: ತಾಲೂಕಿನ ಆರ್ಯಾಪು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂದೀಜಿಯವರ 150ನೇ ಜನ್ಮ ದಿನಾಚರಣೆ ಪ್ರಯಕ್ತ ಮಂಗಳವಾರ ಗಾಂಧಿ ಸಂಕಲ್ಪ ಯಾತ್ರೆ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆಯಿತು.
ಕುರಿಯ ಗ್ರಾಮದ ಬೂಡಿಯಾರಿನಲ್ಲಿ ಎಎಪಿಎಂಸಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಅವರ ಮನೆಯ ವಠಾರದಲ್ಲಿ ಗಾಂಧಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಾಯಿತು. ಬಳಿಕ ಕುರಿಯ ಗ್ರಾಮದ ಬೂಡಿಯಾರಿನಿಂದ ಬಲ್ನಾಡು ಗ್ರಾಮದ ಬುಳೇರಿಕಟ್ಟೆಯ ತನಕ ಪಾದಯಾತ್ರೆ ನಡೆದು, ಅಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಿತು.
ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲ ಅಧ್ಯಕ್ಷ ಜೀವಂಧರ್ ಜೈನ್, ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯಿತಿ ಸದಸ್ಯೆ ದಿವ್ಯ ಪುರುಷೋತ್ತಮ, ತಾಲೂಕು ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಆರ್ಯಾಪು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಸಂತ ಶ್ರೀದುರ್ಗಾ, ಹಿರಿಯ ಬಿಜೆಪಿ ಮುಖಂಡ ಮುಗೆರೋಡಿ ಬಾಲಕೃಷ್ಣ ರೈ ಮತ್ತಿತರರು ಉಪಸ್ಥಿತರಿದ್ದರು.
ಸೋಮವಾರ ನರಿಮೊಗರು ಗ್ರಾಮದ ಶಾಂತಿಗೋಡು ಎಂಬಲ್ಲಿ ಪ್ರಾರಂಭಗೊಂಡು ಮುಂಡೂರು ತನಕ ಗಾಂಧಿ ಸಂಕಲ್ಪ ಪಾದಯಾತ್ರೆ ನಡೆದಿತ್ತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯಿತಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯಿತಿ ಸದಸ್ಯ ಶಿವರಂಜನ್, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲ ಅಧ್ಯಕ್ಷ ಜೀವಂಧರ್ ಜೈನ್, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಾಮದಾಸ್ ಹಾರಾಡಿ, ತಾಲೂಕು ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ನರಿಮೊಗರು ಗ್ರಾಮ ಸಮಿತಿ ಅಧ್ಯಕ್ಷ ಪ್ರವೀಣ್ ನಾಯ್ಕ್ ಸೇರಾಜೆ,,ಬಿಜೆಪಿ ಅಲ್ಪ ಸಂಖ್ಯಾತ ಘಟಕದ ಅಬ್ದುಲ್ ಕುಂಞಿ ಮತ್ತಿತರರು ಪಾಲ್ಗೊಂಡಿದ್ದರು.