ವಿಟ್ಲ : ಕೋಟಿಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

Update: 2019-11-14 12:14 GMT

ವಿಟ್ಲ : ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆಯಲ್ಲಿ ಗುರುವಾರ ಸಂಜೆಯ ವೇಳೆ ನಡೆದಿದೆ‌.

ವಿಟ್ಲ ಪಡ್ನೂರು ಗ್ರಾಮದ ಕಡಂಬು ನಿವಾಸಿ, ವಿಟ್ಲದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಅಶ್ವದ್ ಅಹ್ಮದ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ನೀರಿನಲ್ಲಿ ಮುಳುಗುತ್ತಿದ್ದ ಅಶ್ವದ್ ನನ್ನು ಸ್ಥಳೀಯ ವ್ಯಕ್ತಿಯೊಬ್ಬರು ರಕ್ಷಿಸಿ ವಿಟ್ಲ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಗಿ ತಿಳಿದುಬಂದಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News