ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ
ಉಡುಪಿ, ನ.21: ವಿಶೇಷ ಘಟಕ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿ ನೀಡಲು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಅ್ಯರ್ಥಿಗಳಿಂದ ಅಪ್ರೆಂಟಿಷಿಪ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮ ಅಪ್ರೆಂಟಿಷಿಪ್ ತರಬೇತಿ ಹತ್ತು ತಿಂಗಳ ಅವಧಿಯದ್ದಾಗಿದೆ. ಅ್ಯರ್ಥಿಗಳಿಗೆ ಗಣಕ ಜ್ಞಾನ, ಅದರಲ್ಲೂ ಕನ್ನಡ ಭಾಷೆಯಲ್ಲಿ ಗಣಕ ಜ್ಞಾನ ಕಡ್ಡಾಯ. ಅರ್ಹತೆಯ ಆಧಾರದ ಮೇಲೆ ಆಯ್ಕೆಯಾಗುವ ಇಬ್ಬರು ಅ್ಯರ್ಥಿ ಗಳಿಗೆ ತರಬೇತಿಯ ಅವಧಿಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮೂಲಕ ಪ್ರತಿ ತಿಂಗಳು ತಲಾ 15,000 ರೂ. ಶಿಷ್ಯವೇತನ (ಸ್ಟೈಪಂಡ್) ಪಾವತಿಸಲಾಗುವುದು.
ಅರ್ಜಿಯೊಂದಿಗೆ ಎಸೆಸ್ಸೆಲ್ಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಲು ಡಿ.10ಕೊನೆಯ ದಿನ.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಾಯರ್‌ಕೆರೆ, ಬ್ರಹ್ಮಗಿರಿ, ಉಡುಪಿ (ದೂರವಾಣಿ 0820-2524807, 2985242) ಇವನರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಾರ್ತಾಧಿಕಾರಿ ಗಳ ಪ್ರಕಟಣೆ ತಿಳಿಸಿದೆ.