ಮೊಗರ್ಪಣೆ: ಟೆಂಪೊ- ಬೈಕ್ ನಡುವೆ ಅಪಘಾತ; ಬೈಕ್ ಸವಾರ ಗಂಭೀರ
Update: 2019-11-22 05:44 GMT
ಸುಳ್ಯ: ನ.22: ಟಾಟಾ ಏಸ್ ವಾಹನ ಹಾಗೂ ದ್ವಿಚಕ್ರ ವಾಹನವೊಂದರ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಮೊಗರ್ಪಣೆ ವೆಂಕಟರಮಣ ಸೊಸೈಟಿ ಮುಂಭಾಗದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಗಾಯಾಳುವನ್ನು ಜಾಲ್ಸೂರು ನಿವಾಸಿ ರಘುನಾಥ್ ಎಂಬವರ ಪುತ್ರ ನಿಶಾಂತ್ ಎಂದು ಗುರುತಿಸಲಾಗಿದೆ.
ಸುಳ್ಯ ಕಡೆಯಿಂದ ಜಾಲ್ಸೂರಿನತ್ತ ಹೋಗುತ್ತಿದ್ದ ನಿಶಾಂತ್ ಅವರ ಡಿಯೋ ದ್ವಿಚಕ್ರ ವಾಹನ ಹಾಗೂ ಪುತ್ತೂರು ಕಡೆಯಿಂದ ಸುಳ್ಯಕ್ಕೆ ಫ್ಲೈವುಡ್ ಹೇರಿಕೊಂಡು ಬರುತ್ತಿದ್ದ ಟಾಟಾ ಏಸ್ ವಾಹನದ ನಡುವೆ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ನಿಶಾಂತ್ ಅವರ ಎಡ ಮೊಣಕಾಲು ಸಂಪೂರ್ಣ ಜಖಂಗೊಂಡಿದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನೆಯ ಕುರಿತಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.