ಪಕ್ಷ, ಕುಟುಂಬ ಇಬ್ಬಾಗವಾಗಿದೆ: ಸುಪ್ರಿಯಾ ಸುಲೆ

Update: 2019-11-23 17:52 GMT

 ಹೊಸದಿಲ್ಲಿ, ನ. 23: ಎನ್‌ಸಿಪಿ ನಾಯಕ ಅಜಿತ್ ಪವಾರ್ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗ ಅಧಿಕಾರ ಸ್ವೀಕರಿಸಿದ ಗಂಟೆಗಳ ಬಳಿಕ ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ವ್ಯಾಟ್ಸ್ ಆ್ಯಪ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂದೇಶದಲ್ಲಿ ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ, ‘ಪಕ್ಷ ಹಾಗೂ ಕುಟುಂಬ ವಿಭಜನೆಯಾಯಿತು’ ಎಂದಿದ್ದಾರೆ.

ಸುಪ್ರಿಯಾ ಸುಳೆ ಸೋದರ ಸಂಬಂಧಿ ಅಜಿತ್ ಪವಾರ್ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಹಾಗೂ ಬಿಜೆಪಿಯ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಶನಿವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದರು.

ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಮಾತುಕತೆ ನಡೆಸಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿ ಎಂಬ ಒಮ್ಮತದ ತೀರ್ಮಾನಕ್ಕೆ ಬಂದ ದಿನದ ಬಳಿಕ ಈ ಅನಿರೀಕ್ಷಿತ ಬೆಳವಣಿಗೆ ನಡೆದಿದೆ.

 ಆದರೆ, ಎನ್‌ಸಿಪಿ ವರಿಷ್ಠ ಶರದ್ ಪವಾರ್, ಮಹಾರಾಷ್ಟ್ರದಲ್ಲಿ ಸರಕಾರ ರಚಿಸಲು ಬಿಜೆಪಿಗೆ ಬೆಂಬಲ ನೀಡುವುದು ನನ್ನ ಸೋದರಳಿಯನ ವೈಯುಕ್ತಿಕ ನಿರ್ಧಾರ. ಪಕ್ಷದ ನಿರ್ಧಾರ ಅಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯೊಂದಿಗೆ ಕೈಜೋಡಿಸಲು ನಿರ್ಧರಿಸುವ ಮೂಲಕ ಅಜಿತ್ ಪವಾರ್ ಶಿವಸೇನೆಯ ಬೆನ್ನಿಗೆ ಇರಿದಿದ್ದಾರೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಆರೋಪಿಸಿದ್ದಾರೆ. ಶರದ್ ಪವಾರ್ ಹಾಗೂ ಉದ್ಧವ್ ಠಾಕ್ರೆ ಶೀಘ್ರ ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News