ಕಲ್ಲಬೆಟ್ಟು : ಡಿ.3ರಂದು ಸಮಗ್ರ ಕೃಷಿ ಮಾಹಿತಿ ಶಿಬಿರ

Update: 2019-11-25 15:39 GMT

ಮಂಗಳೂರು, ನ.25: ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಹಾಗೂ ಮಂಗಳೂರು ತಾಲೂಕು ಕೃಷಿ ಇಲಾಖೆ ಮತ್ತು ಕಲ್ಲಬೆಟ್ಟು ಸೇವಾ ಸಹಕಾರ ಸಂಘ (ನಿ)ದ ಸಹಯೋಗದಲ್ಲಿ ಸಮಗ್ರ ಕೃಷಿ ಮಾಹಿತಿ ಶಿಬಿರವು ಡಿ.3ರಂದು ಬೆಳಗ್ಗೆ 9:45ಕ್ಕೆ ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಕ್ಷಯಧಾಮ ಸಭಾಭವನದಲ್ಲಿ ನಡೆಯಲಿದೆ.

ಶಾಸಕ ಉಮಾನಾಥ ಎ. ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೃಷಿಕ ಸಮಾಜದ ಅಧ್ಯಕ್ಷ ಡಿ.ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News