ಮಂಗಳೂರು : ಶಕ್ತಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Update: 2019-11-27 16:57 GMT

ಮಂಗಳೂರು, ನ.27: ನಗರದಲ್ಲಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ., ಭಾರತ ದೇಶವು ಹಲವು ಧರ್ಮ, ಭಾಷೆ, ಸಂಸ್ಕೃತಿ, ಆಚಾರ-ವಿಚಾರಗಳನ್ನು ಒಳಗೊಂಡ ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿದ ರಾಷ್ಟ್ರ. ದೇಶದಲ್ಲಿ ಒಗ್ಗಟ್ಟು, ಶಾಂತಿಯುತ ಸಮಾಜ ನಿರ್ಮಾಣವಾಗಬೇಕೆಂಬ ಉದ್ದೇಶದಿಂದ ಡಾ.ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ ಸಂವಿಧಾನ ರಚಿಸಲಾಯಿತು. ಸಂವಿಧಾನದ ತತ್ವಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿ ಬದುಕೋಣ ಎಂದರು.

ವಿದ್ಯಾರ್ಥಿಗಳು ನ್ಯಾಯ, ಸಮಾನತೆ, ಭ್ರಾತೃತ್ವ ಭಾವನೆ ಮತ್ತು ಸ್ವಾತಂತ್ರದ ಪ್ರದರ್ಶನ ಫಲಕ ಹಿಡಿದು, ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಪಠಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News