ಉಪ್ಪಿನಂಗಡಿ : ಬೈಕ್ ಅಪಘಾತ; ಬಾಲಕ ಮೃತ್ಯು
Update: 2019-11-28 10:27 GMT
ಕಡಬ, ನ. 28. ಬೈಕೊಂದು ಸ್ಕಿಡ್ ಆಗಿ ರಸ್ತೆಗುರುಳಿದ ಪರಿಣಾಮ ಸಹ ಸವಾರ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪ ಗುರುವಾರ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೋಲ್ಪೆ ನಿವಾಸಿ, ನೆಲ್ಯಾಡಿಯ ಖಾಸಗಿ ವಿದ್ಯಾಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿ ಕಿರಣ್ ಎಂದು ಗುರುತಿಸಲಾಗಿದೆ.
ಕಿರಣ್ ಸಹ ಸವಾರನಾಗಿ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಗೋಳಿತೊಟ್ಟು ಸಮೀಪ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಸವಾರ ಗಂಭೀರ ಗಾಯಗೊಂಡಿದ್ದಾರೆ. ಕಿರಣ್ ನನ್ನು ತಕ್ಷಣವೇ ನೆಲ್ಯಾಡಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.