ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Update: 2019-11-28 16:20 GMT

ಮಂಗಳೂರು, ನ.28: ಅಸೌಖ್ಯದಿಂದ ಬಳಲುತ್ತಿದ್ದ ಬೊಕ್ಕಪಟ್ನ ನಿವಾಸಿ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೊಕ್ಕಪಟ್ನ ನಿವಾಸಿ ರೇಶ್ಮಾ (42) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ 20 ವರ್ಷದ ಹಿಂದೆ ಮದುವೆಯಾಗಿದ್ದು, ಇವರ ಬೊಕ್ಕಪಟ್ನ ಮನೆಯನ್ನು ಬಾಡಿಗೆ ನೀಡಿ ಉದ್ಯೋಗ ಕಾರಣದಿಂದ ಬೆಂಗಳೂರಿಗೆ ಹೋಗಿ ನೆಲೆಸಿದ್ದರು. ಆದರೆ ಕೆಲವು ಸಮಯದಿಂದ ಅನಾರೋಗ್ಯದಲ್ಲಿ ಏರುಪೇರಾದ ಕಾರಣ ಗಂಡನ ಜತೆ ನಗರಕ್ಕೆ ಬಂದು ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದರು.

ಮಂಗಳವಾರ ಚಿಕಿತ್ಸೆಗೆ ತೆರಳಿದ ಇವರು ಏಕಾಏಕಿ ನಾಪತ್ತೆಯಾಗಿದ್ದರು. ವಿಷಯ ತಿಳಿದ ಅವರ ಸಂಬಂಧಿಕರು ಎಲ್ಲಿ ಹುಡುಕಾಡಿದರೂ ಪತ್ತೆಯಾಗಲಿಲ್ಲ. ಬುಧವಾರ ಇವರ ಮೃತದೇಹ ಬೋಳೂರು ಮಠದಕಣಿಯ ಬಾವಿಯಲ್ಲಿ ಪತ್ತೆಯಾಗಿದೆ.

ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಬರ್ಕೆ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News