ಡಿ.1:ಮಂಗಳೂರಿನಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

Update: 2019-11-29 14:52 GMT

ಮಂಗಳೂರು, ನ.29: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ)ದ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟವು ಡಿ.1ರಂದು ಬೆಳಗ್ಗೆ 9ರಿಂದ ನಗರದ ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಷ್ಟ್ರೀಯ ಬಾಸ್ಕೆಟ್‌ಬಾಲ್ ಆಟಗಾರ ಸೌಕಿನ್ ಶೆಟ್ಟಿ ಕ್ರೀಡಾಕೂಟದ ಉದ್ಘಾಟಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು. ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ, ಐವನ್ ಡಿಸೋಜ, ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ , ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ. ಆನಂದ ಶೆಟ್ಟಿ ಅತಿಥಿಗಳಾಗಿ ಭಾಗವಹಿಸುವರು.

ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರಿನಿವಾಸ ಪೂಜಾರಿ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸುವರು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಯು.ಟಿ. ಖಾದರ್ , ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಷಾ ಅತಿಥಿಗಳಾಗಿ ಭಾಗವಹಿಸುವರು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News