ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-12-03 16:40 GMT

ಉಡುಪಿ, ಡಿ. 3: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ 76 ಬಡಗು ಬೆಟ್ಟು ಗ್ರಾಮದ ಬೈಲೂರು ನಿವಾಸಿ ದೇವಿ (83) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ. 2ರಂದು ಮಧ್ಯಾಹ್ನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ: ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದ ಶಿವಳ್ಳಿ ಗ್ರಾಮದ ಲಲಿತಾ(79) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.2 ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News