ಡಿ.10ರಂದು ಮಾಧ್ಯಮ ಗ್ರಂಥಾಲಯ ಉದ್ಘಾಟನೆ
ಮಂಗಳೂರು, ಡಿ.8: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಲೇಡಿಹಿಲ್ ನಲ್ಲಿರುವ ಪತ್ರಿಕಾಭವನದಲ್ಲಿ ಪತ್ರಕರ್ತರ ಅನುಕೂಲಕ್ಕಾಗಿ ಆರಂಭಿಸಲಾಗುವ ಮಾಧ್ಯಮ ಗ್ರಂಥಾಲಯದ ಉದ್ಘಾಟನೆ ಡಿ.10ರಂದು ಬೆಳಗ್ಗೆ 11:00 ಗಂಟೆಗೆ ನಡೆಯಲಿದೆ.
ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಸ್ನೇಹಲ್ ರಾಯಮನೆ ಮಾಧ್ಯಮ ಗ್ರಂಥಾಲಯದ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ (ಕೆಡಬ್ಲುಜೆಯು) ಅಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಯಾಗಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಆರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ದ.ಕ.ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕೆ.ಆನಂದ ಶೆಟ್ಟಿ ಭಾಗವಹಿಸಲಿರುವರು.
ಮೀಡಿಯಾ ಹೆಲ್ತ್ ಕ್ಲಿನಿಕ್: ಪತ್ರಿಕಾಭವನದಲ್ಲಿ ಪತ್ರಕರ್ತರಿಗೆ ಮತ್ತು ಸಾರ್ವಜನಿಕರಿಗಾಗಿ ಎ.ಜೆ. ಆಸ್ಪತ್ರೆಯ ಸಹಯೋಗದೊಂದಿಗೆ ಈಗಾಗಲೇ ಆರಂಭಿಸಲಾಗಿರುವ ಮೀಡಿಯಾ ಹೆಲ್ತ್ ಕ್ಲಿನಿಕ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ ಸೌಲಭ್ಯ ಡಿ.10 ರಂದು ಲಭ್ಯವಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.