ಉಡುಪಿ ಅಂತರ್ ಶಾಲಾ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Update: 2019-12-09 14:33 GMT

ಉಡುಪಿ, ಡಿ.9: ರಾಯಚೂರು ಎ.ಜೆ.ಅಕಾಡೆಮಿ ಹಾಗೂ ತೋನ್ಸೆ ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಉಡುಪಿ ಅಂತರ್ ಶಾಲಾ ಮಟ್ಟದ ವಿಜ್ಞಾನ ಮೇಳವನ್ನು ಸಾಲಿಹಾತ್ ಶಾಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.

 ಮೇಳವನ್ನು ಉದ್ಘಾಟಿಸಿದ ಹಿರಿಯಡ್ಕ ಪದವಿ ಪೂರ್ವ ಕಾಲೇಜಿನ ಪ್ರಾಂಶು ಪಾಲ ಮಂಜುನಾಥ್ ಭಟ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಹಾಗೂ ಅನ್ವೇಷಣೆಯ ಪ್ರೇರಣೆ ನೀಡಲು ಈ ವಿಜ್ಞಾನ ಮೇಳ ಪೂರಕ ವಾಗಿದೆ. ವಿದ್ಯಾರ್ಥಿಗಳನ್ನು ಕ್ರಿಯಾತ್ಮಕವಾಗಿ ಬೆಳೆಸು ವುದು ಇಂದಿನ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕಾಗಿದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ವಹಿಸಿದ್ದರು. ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಕ್ಬರ್ ಆಲಿ, ಉಪಾಧ್ಯಕ್ಷ ಇದ್ರಿಸ್ ಹೂಡೆ, ಕಾರ್ಯದರ್ಶಿ ಜಿ.ಇಮ್ತಿಯಾಝ್, ಬ್ರಹ್ಮಾವರ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ಎಸ್‌ಐಓ ರಾಜ್ಯಾಧ್ಯಕ್ಷ ನಿಹಾಲ್ ಕಿದಿಯೂರ್, ಆಡಳಿತಾಧಿಾರಿ ಅಸ್ಲಂ ಹೈಕಾಡಿ ಉಪಸ್ಥಿತರಿದ್ದರು.

ಎ.ಜೆ.ಅಕಾಡೆಮಿಯ ನಿರ್ದೇಶಕ ಡಾ.ಅಬ್ದುಲ್ಲಾ ಜಾವೇದ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ವಿದ್ಯಾರ್ಥಿನಿ ಮೇವಿಶ್ ಪ್ರಾರ್ಥನೆಗೈದರು. ಪಿ.ಯು. ಕಾಲೇಜಿನ ಉಪಪ್ರಾಂಶುಪಾಲೆ ಶಬಾನಾ ಮುಮ್ತಾಜ್ ಸ್ವಾಗತಿಸಿದರು. ಶಿಕ್ಷಕಿ ಶೈಲಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಈ ಮೇಳದಲ್ಲಿ ಸುಮಾು 30 ಶಾಲೆಗಳು ಭಾಗವಹಿಸಿದ್ದವು.

ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸ ಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನ 8ನೇ ತರಗತಿ ವಿದ್ಯಾರ್ಥಿ ಲಿಖಿತ್ ಆರ್. ಅದ್ಯಯನ ನಡೆಸಿ ಬರೆದ ‘ಮರುವಾಯಿ ನೆಲೆ-ಬೆಲೆ’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ಸಾಲಿಹಾತ್ ಶಾಲಾ ಹಳೆ ವಿದ್ಯಾರ್ಥಿ ಅಫ್ಸರ್ ಹಂಜ, ಮಣಿಪಾಲ ಕೆಎಂಸಿಯ ಎಂ.ಡಿ. ವಿದ್ಯಾರ್ಥಿನಿ ಡಾ.ಸಮೀಯ ಸುಲ್ತಾನ್ ಮುಖ್ಯ ಅತಿಥಿ ಗಳಾಗಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಸುನಂದ, ಲವೀನ ಕ್ಲಾರ, ಉಪಸ್ಥಿತರಿದ್ದರು. ಸಮೀನ ನಜೀರ್ ವಂದಿಸಿದರು.

ಮೇಳದ ಸ್ಪಧೆರ್ಯ ವಿಜೇತರು

ಕಾಪು ದಂಡತೀರ್ಥ ಆಂಗ್ಲ ಮಾಧ್ಯಮ ಶಾಲೆಯ ತೀರ್ಥ, ಅಲೆವೂರು ಶಾಂತಿನಿಕೇತನ್ ಆಂಗ್ಲ ಮಾಧ್ಯಮ ಶಾಲೆಯ ಮೇದಿನಿ ಪ್ರಕಾಶ್ ಐತಾಳ್, ಪೂರ್ಣಿಮ, ಬ್ರಹ್ಮಾವರ ಎಸ್‌ಎಂಎಸ್ ಆಂಗ್ಲ ಮಾಧ್ಯಮ ಶಾಲೆಯ ಸಿಂಚನ ಶೆಟ್ಟಿ, ಭಕ್ತಿ, ಪ್ರಥಮ್, ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸೌಜ್ನ ಆರ್. ಆಚಾರ್, ದೀಕ್ಷ, ಸಾನಿಕ, ಹೂಡೆ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಆಯೆಷಾ ನಾಕುದ, ಇಸ್ಮಾ ಸಫಾ, ನುಝಾತ್ ಫಾತಿಮಾ, ಉಡುಪಿ ಅನಂತೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸುಮೇಧ್ ನಾವುಡ, ಕಾರ್ತಿಕ್ ಶೆಣೈ ಪ್ರಶಸ್ತಿಯನ್ನು ಪಡೆದುಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News