ಡಿ.14ರಂದು 'ಬ್ಯಾರೀಸ್ ಕ್ವೆಂಚ್-19' ಕ್ವಿಝ್ ಸ್ಪರ್ಧೆಯ ಗ್ರಾಂಡ್ ಫಿನಾಲೆ

Update: 2019-12-09 16:23 GMT

ಮಂಗಳೂರು, ಡಿ. 9: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಿಯು ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಯೋಗದೊಂದಿಗೆ ಬ್ಯಾರೀಸ್ ಅಕಾಡೆಮಿ ಆಫ್ ಲರ್ನಿಂಗ್-ಬ್ಯಾರೀಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಮತ್ತು ಬ್ಯಾರೀಸ್ ಎನ್ವಿರೊ ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್ (ಬೀಡ್ಸ್) ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ಅಂತರ್ ಕಾಲೇಜು ಕ್ವಿಝ್ ಸ್ಪರ್ಧೆ ‘ಬ್ಯಾರೀಸ್ ಕ್ವೆಂಚ್-19’ರ ಗ್ರಾಂಡ್ ಫಿನಾಲೆಯು ಡಿ.14ರಂದು ನಡೆಯಲಿದೆ.

ಆ.19ರಂದು ಸ್ಪರ್ಧೆಗೆ ಚಾಲನೆ ನೀಡಲಾಗಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 52 ಕಾಲೇಜುಗಳಿಂದ ಸುಮಾರು 4,500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಗ್ರಾಂಡ್ ಫಿನಾಲೆಯಲ್ಲಿ ಆರು ಆಯ್ದ ತಂಡಗಳು ಭಾಗಿಯಾಗಲಿವೆ. ಫಿನಾಲೆಯಲ್ಲಿ ಮೊದಲ ಮೂರು ಸ್ಥಾನಗಳ ವಿಜೇತರು ನಗದು ಬಹುಮಾನ ಮತ್ತು ಟ್ರೋಫಿಗಳನ್ನು ಪಡೆಯಲಿದ್ದಾರೆ.

ಮಂಗಳೂರಿನ ಬ್ಯಾರೀಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆಯಲಿರುವ ಗ್ರಾಂಡ್ ಫಿನಾಲೆಗೆ ನಿವೃತ್ತ ಶಿಕ್ಷಣ ನಿರ್ದೇಶಕಿ ಫಿಲೋಮಿನಾ ಲೋಬೊ ಅವರು ಮುಖ್ಯ ಅತಿಥಿಯಾಗಿರಲಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಿಯು ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹಾಗೂ ಮೂಡಬಿದಿರೆ ರೋಟರಿ ಪಿಯು ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಡಿಕೋಸ್ಟಾ ಅವರು ಗೌರವ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಬ್ಯಾರೀಸ್ ಗ್ರೂಪ್‌ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಬಿಐಟಿ ಪ್ರಾಂಶುಪಾಲ ಡಾ.ಎಸ್.ಐ.ಮನ್ಸೂರ್ ಬಾಷಾ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News