ಬ್ಯಾರಿ ಭವನ ನಿರ್ಮಾಣಕ್ಕೆ 6 ಕೋ.ರೂ. ಮಂಜೂರು: ರಹೀಂ ಉಚ್ಚಿಲ್

Update: 2019-12-10 06:27 GMT

ಮಂಗಳೂರು, ಡಿ.10: ಬ್ಯಾರಿ ಭವನ ನಿರ್ಮಾಣಕ್ಕೆ 6 ಕೋ.ರೂ. ಮಂಜೂರಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದ್ದಾರೆ.

ಅಕಾಡಮಿಯ ಕಚೇರಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ನೀರುಮಾರ್ಗದಲ್ಲಿ 25 ಸೆಂಟ್ಸ್ ಜಮೀನಿನಲ್ಲಿ ಬ್ಯಾರಿ ಭವನ ನಿರ್ಮಾಣಗೊಳ್ಳಲಿದೆ. ಶೀಘ್ರವೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದವರು ಮಾಹಿತಿ ನೀಡಿದರು.

ಬ್ಯಾರಿ ಭವನಕ್ಕೆ 8 ಕೋಟಿ ರೂ. ಬೇಡಿಕೆ ಇಡಲಾಗಿದ್ದು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದಿಂದ 6 ಕೋ.ರೂ. ಮಂಜೂರು ಆಗಿದೆ. ಈ ಪೈಕಿ 3 ಕೋ.ರೂ. ಬಿಡುಗಡೆ ಆಗಿದೆ ಎಂದವರು ತಿಳಿಸಿದರು.

2020-21ನೆ ಶೈಕ್ಷಣಿಕ ವರ್ಷದಿಂದ 6ನೇ ತರಗತಿಯಿಂದ ಬ್ಯಾರಿ ಪಠ್ಯ ಪುಸ್ತಕ ಅಳವಡಿಸಲಾಗುವುದು. 2020ರೊಳಗೆ ವಿಶ್ವ ಬ್ಯಾರಿ ಸಮ್ಮೇಳನ ನಡೆಸಲಾಗುವುದು ಎಂದು ರಹೀಂ ಉಚ್ಚಿಲ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ರಿಜಿಸ್ಟ್ರಾರ್ ಪೂರ್ಣಿಮಾ, ಸದಸ್ಯರಾದ ಮುರಳಿರಾಜ್, ಚಂಚಲಾಕ್ಷಿ, ಸುರೇಖಾ, ರೂಪೇಶ್ ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News