ತಂಬಾಕು ನಿಯಂತ್ರಣ ಹಾಗೂ ಕೋಟ್ಪಾ ಕಾಯ್ದೆ ಕುರಿತು ಕಾರ್ಯಗಾರ

Update: 2019-12-13 15:44 GMT

ಮಂಗಳೂರು, ಡಿ.13: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ದ.ಕ. ಹಾಗೂ ಬ್ಲೂಮ್ ಬರ್ಗ್ ಇನಿಯೇಟಿವ್ ಬೆಂಗಳೂರು ಇದರ ವತಿಯಿಂದ ದ.ಕ. ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಕೋಟ್ಪಾ -2003 ತನಿಖಾ ದಳದ ಅಧಿಕಾರಿಗಳಿಗೆ ತಂಬಾಕು ನಿಯಂತ್ರಣ ಮತ್ತು ಕೋಟ್ಪಾ 2003 ಕುರಿತು ಕಾರ್ಯಗಾರವು ಇತ್ತೀಚೆಗೆ ನಗರದಲ್ಲಿ ಜರುಗಿತು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್, ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ತಾಲೂಕು ಮಟ್ಟದಲ್ಲಿ ನಡೆಯಬೇಕಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾ. ಸುಷ್ಮಾ ಅಡಪ ತಂಬಾಕು ಸೇವನೆಯ ದುಷ್ಪರಿಣಾಮದ ಕುರಿತು ಮತ್ತು ಸಂಪತ್ ಕುಮಾರ್ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನದಲ್ಲಿ ತಾಲೂಕು ಮಟ್ಟದ ತನಿಖಾ ದಳದ ಅಧಿಕಾರಿಗಳ ಪಾತ್ರದ ಕುರಿತು ವಿವರಿಸಿದರು.

ತಂಬಾಕು ನಿಯಂತ್ರಣ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ.ಪ್ರವೀಣ್ ಸ್ವಾಗತಿಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಶ್ರುತಿ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News