ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾಸಭೆ
Update: 2019-12-17 15:27 GMT
ಉಡುಪಿ, ಡಿ.17: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ, ಇದರ 2018ನೇ ಸಾಲಿನ ವಾರ್ಷಿಕ ಮಹಾಸಭೆ ಡಿ. 22ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಶಾರದಾ ಇಂಟರ್ ನ್ಯಾನಲ್ ಹೋಟೇಲ್‌ನಲ್ಲಿ ನಡೆಯಲಿದೆ.
ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿರುವರು. ಮಹಾಸಭೆಯಲ್ಲಿ 2018ನೇ ವರ್ಷದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ಸರಕಾರಿ ನೌಕರರು ಹಾಗೂ ನೌಕರರ ಮಕ್ಕಳನ್ನು, 2018-19ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90 ಹಾಗೂ ಅದಕ್ಕಿಂತ ಹೆಚ್ಚಿನ ಅಂಕ ಪಡೆದ ನೌಕರರ ಮಕ್ಕಳನ್ನು ಹಾಗೂ ಡಿಸೆಂಬರ್ 2018ರಿಂದ ನವೆಂಬರ್ 2019ರವರೆಗೆ ನಿವೃತ್ತರಾದ ಸರಕಾರಿ ನೌಕರರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.