ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

Update: 2019-12-18 16:49 GMT

ಉಡುಪಿ, ಡಿ.18:ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ಡಿ. 19ರಿಂದ 21ರವರೆಗೆ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಡಿ.19ರಂದು ಸಂಜೆ 4:30ಕ್ಕೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್ ಅವರಿಂದ ನಡೆಯಲಿದೆ.

ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ ಡಿ.21ರಂದು ಸಂಜೆ 4 ಗಂಟೆಗೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಜೆ. ಅರುಣ್ ಚಕ್ರವರ್ತಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಮುಖ್ಯ ಅತಿಥಿಗಳಾಗಿ ಬಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News