ಡಿ.21ರವರೆಗೆ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ

Update: 2019-12-18 18:16 GMT
ಸಾಂದರ್ಭಿಕ ಚಿತ್ರ

ಉಡುಪಿ, ಡಿ.18: ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಅಖಿಲ ಭಾರತ್ ಬಂದ್ ಮಾಡುವ ಕರೆಕೊಟ್ಟಿದ್ದು ಈ ಹಿನ್ನೆಲೆ ಉಡುಪಿ ಜಿಲ್ಲಾದ್ಯಂತ ಡಿ.19 ಬೆಳಗ್ಗೆ 6 ಗಂಟೆಯಿಂದ ಡಿ.21 ರಾತ್ರಿ 11 ಗಂಟೆವರೆಗೆ 144 ಸೆಕ್ಷನ್ ಅನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

ಉಡುಪಿ ಜಿಲ್ಲೆಯ ಕೆಲವೊಂದು ಸೂಕ್ಷ್ಮ ಪ್ರದೇಶಗಳಲ್ಲಿ ಮೆರವಣಿಗೆ, ಪ್ರತಿಭಟನೆ, ಕಾರ್ಯಕ್ರಮ ನಡೆಸಿದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಭಂಗ ಉಂಟಾಗುವ ಸಾಧ್ಯತೆಯಿರುವ ಕಾರಣ ಉಡುಪಿ ಜಿಲ್ಲಾದ್ಯಂತ 144 ಸೆಕ್ಷನ್ ಅನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News